ಅಂಗವಿಕಲ ಮಕ್ಕಳಿಗೆ ಕ್ಷೇತ್ರ ಭೇಟಿ

ಎಚ್.ಡಿ.ಕೋಟೆ ಪಟ್ಟಣದಲ್ಲಿ ಅಂಗವಿಕಲ ಮಕ್ಕಳಿಗಾಗಿ ಒಂದು ದಿನದ ಕ್ಷೇತ್ರ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಎಚ್.ಡಿ.ಕೋಟೆ ಪಟ್ಟಣದಲ್ಲಿ ಅಂಗವಿಕಲ ಮಕ್ಕಳಿಗಾಗಿ ಒಂದು ದಿನದ ಕ್ಷೇತ್ರ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Published on

ಎಚ್.ಡಿ.ಕೋಟೆ: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಮಧ್ಯವರ್ಜನ ಚಟುವಟಿಕೆಯಡಿ ಎಚ್.ಡಿ. ಕೋಟೆ ತಾಲೂಕಿನ ನೂರು ಅಂಗವಿಕಲ ಮಕ್ಕಳಿಗೆ ಕ್ರೀಡೆ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಪಟ್ಟಣದಿಂದ ಕರೆದೊಯ್ಯಲಾಯಿತು. ಕಾರ್ಯಕ್ರಮಕ್ಕೆ ಬಿಆರ್‌ಪಿ ಶಿವಶಂಕರ್ ಚಾಲನೆ ನೀಡಿದರು.

ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ಗಿರೀಶ್ ಮೂರ್ತಿ ಈ ವೇಳೆ ಮಾತನಾಡಿ, ತಾಲೂಕಿನ ನೂರು ಅಂಗವಿಕಲ ಮಕ್ಕಳನ್ನು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಯಿಂದ ಸರಗೂರು ಪಟ್ಟಣದಲ್ಲಿರುವ ಸ್ವಾಮಿ ವಿವೇಕಾನಂದ ಶಾಲಾ ಆವರಣದಲ್ಲಿನ ಸೈನ್ಸ್ ಪಾರ್ಕ್ ಗೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ಆಟೋಟಗಳು ಮತ್ತು ಆ ಪಾರ್ಕ್‌ನ ವಿಶೇಷತೆಗಳನ್ನು ತಿಳಿಸಲಾಗುವುದು. ಅಲ್ಲೇ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಎಸ್. ಮಹದೇವು, ಪ್ರಕಾಶ್, ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net