ನೀರು ಬಿಡದಿದ್ದರೆ ದೊಡ್ಡಮಟ್ಟದಲ್ಲಿ ಹೋರಾಟ

mkg1c
Published on

ಹೊನ್ನಾಳಿ: ಸರ್ಕಾರ ಭದ್ರಾ ನಾಲೆಗಳಿಗೆ ಕೊಟ್ಟ ಮಾತಿನಂತೆ 100 ದಿನ ನೀರು ಬಿಡುವ ಮೂಲಕ ಅಚ್ಚುಕಟ್ಟು ಭಾಗದ ರೈತರ ಹಿತ ಕಾಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರನ್ನು ಸಂಘಟಿಸಿ ದೊಡ್ಡಮಟ್ಟದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಭದ್ರಾ ನಾಲೆಗಳಿಗೆ ನೂರು ದಿನಗಳ ಕಾಲ ನೀರು ಬಿಡುತ್ತಾರೆಂದು ನಂಬಿ ರೈತರು ನಾಟಿ ಮಾಡಿದ್ದಾರೆ. ಆದರೆ, ಸರ್ಕಾರ ಇದೀಗ ನೀರು ನಿಲ್ಲಿಸಿದ್ದು ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಮಧುಬಂಗಾರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡುತ್ತೇನೆ. ಕೂಡಲೇ ಭದ್ರಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರವಾಗಿ ಮಾಧ್ಯಮದಲ್ಲಿ ನೋಡಿದ್ದೇನೆ. ಮೈತ್ರಿ ಬಗ್ಗೆ ನನಗೆ ಮಾಹಿತಿ ಇಲ್ಲ. ಕೇಂದ್ರದ ವರಿಷ್ಟರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net