ದೌರ್ಜನ್ಯದ ವಿರುದ್ಧ ಹೋರಾಟ

bhr dss
ಬಾಳೆಹೊನ್ನೂರಿನಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಎಂ.ವಿ.ಭವಾನಿ, ವಸಂತಕುಮಾರ್, ಸುಬ್ರಹ್ಮಣ್ಯ, ಶಶಿಕುಮಾರ್, ಸತೀಶ್ ಇದ್ದರು.
Published on

ಬಾಳೆಹೊನ್ನೂರು: ದೀನರು, ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸುತ್ತದೆ ಎಂದು ದಲಿತ ಮಹಿಳಾ ಒಕ್ಕೂಟದ ಸಂಘಟನಾ ಸಂಚಾಲಕಿ ಎಂ.ವಿ.ಭವಾನಿ ಹೇಳಿದರು.

ಡಿಎಸ್‌ಎಸ್ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿ, ದಲಿತ ಸಂಘರ್ಷ ಸಮಿತಿ ರಾಜ್ಯಾದ್ಯಂತ ಬಲಿಷ್ಟ ಸಂಘಟನೆಯಾಗಿ ಬೆಳೆದಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ.ಕೃಷ್ಣಪ್ಪ ಅವರ ಹೋರಾಟಗಳನ್ನು ಮುಂದುವರಿಸಿ ಶೋಷಿತರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸಂಘಟನೆ ಜಿಲ್ಲಾ ಸಂಚಾಲಕ ವಸಂತ್‌ಕುಮಾರ್ ಮಾತನಾಡಿ, ಜಿಲ್ಲಾದ್ಯಂತ ದಲಿತ ಸಂಘರ್ಷ ಸಮಿತಿ ಮಹಿಳಾ ಒಕ್ಕೂಟ, ನೌಕರರ ಒಕ್ಕೂಟ, ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ದಲಿತ ವಕೀಲರ ಒಕ್ಕೂಟಗಳನ್ನು ರಚನೆ ಮಾಡುವುದಾಗಿ ತಿಳಿಸಿದರು.
ತಾಲೂಕು ಸಂಚಾಲಕರಾಗಿ ಸಂದೀಪ್, ಮಹಿಳಾ ಘಟಕದ ಸಂಚಾಲಕರಾಗಿ ಮಾಗುಂಡಿ ಸುಜಾತಾ ಅವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಸಂಘಟನಾ ಸಂಚಾಲಕ ಸುಬ್ರಹ್ಮಣ್ಯ, ಪ್ರಮುಖರಾದ ಶಶಿಕುಮಾರ್, ಸತೀಶ್, ನಾರಾಯಣ ಜಕ್ಕಣಕ್ಕಿ, ರಮೇಶ, ಅರುಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net