

ಹಾಸನ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಖೋಖೋ ಪಂದ್ಯಾವಳಿ ಮುಗಿದ ವೇಳೆ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಪಿಯು ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿಗಳು ಪರಸ್ಪರ ಜಗಳವಾಡಿದ್ದಾರೆ. ಈ ಬಗ್ಗೆ ಆಯೋಜಕರ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.