

ಬೆಂಗಳೂರು: ಸಂಚಾರದ ವೇಳೆ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರು ಜಗಳ ಬಿಡಿಸಿರುವುದು ಕಂಡು ಬಂದಿದೆ.
ಪ್ರಯಾಣಿಕರಿಬ್ಬರು ಕೈಕೈ ಮಿಲಾಯಿಸಿಕೊಂಡಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ.
ಈ ಬಗ್ಗೆ ಬಿಎಂಆರ್ಸಿಎಲ್ ಪ್ರತಿಕ್ರಿಯಿಸಿದ್ದು, ಟನೆ ಗಮನಕ್ಕೆ ಬಂದಿದೆ. ದೃಶ್ಯಾವಳಿಗಳನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಪತ್ತೆ ಮಾಡಲಾಗುತ್ತದೆ. ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.