

ಮಂಗಳೂರು: ನಗರದ ಬಳ್ಳಾಲ್ ಬಾಗ್ ನಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತಂಡಗಳ ನಡುವೆ ನಡೆದ ಈ ಜಗಳದಲ್ಲಿ ಒಂದು ಚತುಷ್ಚಕ್ರ ವಾಹನ ಸೇರಿ, ಆರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಏಳು ಮಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಬರ್ಕೆ ಠಾಣಾ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.