

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ರಾಜ್ಯದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ದೊರೆತ್ತಿದ್ದು, ಬಸ್ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.
ಕೆಲವೆಡೆ ಮಹಿಳೆಯರು ಬಸ್ ಹತ್ತುವಾಗ ಡೋರ್, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ. ಇದೀಗ ಕಳಿತುಕೊಳ್ಳುವ ವಿಚಾರವಾಗಿ ಮಹಿಳೆಯರಿಬ್ಬರು ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯೂ ಮೈಸೂರು ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಆಷಾಢ ಮಂಗಳವಾರ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ತೆರಳಲೆಂದು ಮಹಿಳೆಯೊಬ್ಬರು ಕಿಟಕಿ ಮೂಲಕ ಸೀಟಿಗೆ ಕರವಸ್ತ್ರ ಹಾಕಿ ಕಾಯ್ದಿಸಿದ್ದಾರೆ. ಇದನ್ನು ಗಮನಿಸಿದ ಮತ್ತೋರ್ವ ಮಹಿಳೆ ಸೀಟಿನ ಮೇಲೆ ಹಾಕಲಾಗಿದ್ದ ಕರ್ಚೀಫ್ ಅನ್ನು ತೆಗೆದು ಬಿಸಾಡಿದ್ಧಾರೆ.
ಇದನ್ನು ಗಮನಿಸಿದ ಮಹಿಳೆ ಈ ವಿಚಾರ ಇಬ್ಬರ ನಡುವಿನ ಗದ್ದಲಕ್ಕೆ ಕಾರಣವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ನೀರೆಯರು ಹೊಡೆದಾಡಿಕೊಂಡಿದ್ಧಾರೆ. ಇನ್ನು ಘಟನೆಯ ವಿಡಿಯೋ ವೈರಲ್ ಆಗಿದ್ದು, ನಿಜವಾದ ನಾರಿ ಶಕ್ತಿ ಅನಾವರಣ ಆಯಿತು ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ಧಾರೆ.