

ಸಿಂಧನೂರು: ಬೆಂಗಳೂರಿನಲ್ಲಿ ಅನ್ಯಭಾಷೆ ನಾಮಫಲಕ ತೆಗೆದು ಕನ್ನಡ ನಾಮಫಲಕ ಅಳವಡಿಸಲು ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ನಾರಾಯಣಗೌಡ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಕರವೇಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಟಿ.ನಾರಾಯಣಗೌಡರನ್ನು ಬಂಧಿಸಿ, ದೌರ್ಜನ್ಯ ನಡೆಸಿರುವುದು ಖಂಡನೀಯ. ನಾರಾಯಣಗೌಡ ಹಾಗೂ ಇತರರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.