ದೇಶಕ್ಕಾಗಿ ಪ್ರಾಣತೆತ್ತ ಹೋರಾಟಗಾರರು

15 ckm 1
ಚಿಕ್ಕಮಗಳೂರಿನ ಸುಬಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಲಾಗಿದ್ದ ೭೮ನೇ ಸ್ವಾತಂತ್ರೊö್ಯÃತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಧ್ವಜವಂದನೆ ಸ್ವೀಕರಿಸಿದರು.
Published on

ಚಿಕ್ಕಮಗಳೂರು: ಸ್ವಾತಂತ್ರö್ಯ ಹೋರಾಟಗಾರರು ವೈಯಕ್ತಿಕ ಸುಖ, ಸಂತೋಷ ಎಲ್ಲವನ್ನೂ ತ್ಯಾಗ ಮಾಡಿ ಬಲಿಯಾದವರು. ಹೋರಾಟದಲ್ಲಿ ಪೆಟ್ಟು ತಿಂದ, ಸೆರೆಮನೆ ವಾಸ ಅನುಭವಿಸಿದ ಸಹಸ್ರಾರು ದೇಶಭಕ್ತರನ್ನು ನೆನಪಿಸಿಕೊಳ್ಳಬೇಕಾಗಿರುವುದು ಪ್ರತಿಯೊಬ್ಬ ನಾಗರಿಕರನ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ನಗರದ ಸುಬಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಲಾಗಿದ್ದ ೭೮ನೇ ಸ್ವಾತಂತ್ರೊö್ಯÃತ್ಸವ ಸಮಾರಂಭದಲ್ಲಿ ರಾಷ್ಟçಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ದೇಶದ ಸ್ವಾತಂತ್ರö್ಯಕ್ಕಾಗಿ ಮಹನೀಯರು ಹೋರಾಟ ನಡೆಸಿ ಬಲಿದಾನ ನೀಡಿದ್ದಾರೆ. ಅವರ ತ್ಯಾಗವನ್ನು ನಾವು ನೆನಪಿಸಿಕೊಳ್ಳಲೇಬೇಕು ಎಂದರು.
ಸ್ವಾತAತ್ರö್ಯ ದಿನಾಚರಣೆ ಎಂದರೆ ನಮ್ಮ ದೇಶಕ್ಕೆ ಸ್ವಾತಂತ್ರö್ಯ ಸಿಕ್ಕ ದಿನದ ಆಚರಣೆ ಮಾತ್ರವಲ್ಲ ಈ ನೆಲ, ಜಲ ಹಾಗೂ ಈ ದೇಶದ ಸಂಸ್ಕÈತಿ ಪರಕೀಯರಿಂದ ಮುಕ್ತವಾದ ಅಭಿಮಾನದ ಸ್ವಾತಂತ್ರö್ಯವನ್ನು ಅನುಭವಿಸಿದ ಕ್ಷಣವನ್ನು ಮೆಲುಕು ಹಾಕುವ ಸಂತಸದ ದಿನ ಎಂದು ಹೇಳಿದರು.
ನಮ್ಮ ಜಿಲ್ಲೆಯ ಹೊಸಕೊಪ್ಪ ಕೃಷ್ಣರಾಯರು ಆಗಸ್ಟ್ ೧೯, ೧೯೨೭ರಂದು ಗಾಂಧೀಜಿ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ಕರೆತರಲು ಪ್ರಮುಖ ಪಾತ್ರ ವಹಿಸಿದ್ದರು. ಗಾಂಧೀಜಿಯವರು ಮಾಡಿದ ಭಾಷಣಗಳ ಪ್ರೇರಣೆಯಿಂದ ಪ್ರಭಾವಿತರಾಗಿ ಜಿಲ್ಲೆಯಿಂದಲೂ ಹಲವು ಜನ ಸ್ವಾತಂತ್ರö್ಯ ಸೇನಾನಿಗಳು ಸ್ವಾತಂತ್ರö್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದರು ಎಂದರು.
ಜಿಲ್ಲಾಡಳಿತವು ಈ ಘಟನೆಯ ಸವಿ ನೆನಪಿಗಾಗಿ ಅವರು ಭಾಷಣ ಮಾಡಿದ ಸ್ಥಳವನ್ನು ನೆನಪಿನಂಗಳ ಎಂದು ನಾಮಕರಣ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ ಪುತ್ಥಳಿಯನ್ನು ಅನಾವರಣಗೊಳಿಸಿದೆ. ನಮ್ಮ ಜಿಲ್ಲೆಯಲ್ಲೂ ಸಹ ಸಾಮಾಜಿಕ ಅಸಮಾನತೆಯ ವಿರುದ್ಧದ ಹೋರಾಟ, ವಿದೇಶಿ ವಸ್ತç ವಸ್ತುಗಳ ಬಹಿಷ್ಕಾರ, ಸ್ವದೇಶಿ ವಸ್ತುಗಳ ಬಳಕೆಗೆ ಪ್ರೋತ್ಸಾಹ, ಕಾನೂನು ಭಂಗ ಚಳವಳಿ ಇಂತಹ ಅನೇಕ ಹೋರಾಟಗಳು ಜಿಲ್ಲೆಯಿಂದ ದಾಖಲಾಗಿವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ದೀನ ದಲಿತರ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಮತ್ತು ದುರ್ಬಲರ ಏಳಿಗೆಗಾಗಿಯೇ ಶ್ರಮಿಸುತ್ತದೆ. ಇದಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಟೆಕ್ಸ್ಟೈಲ್ಸ್ ಪಾರ್ಕ್ಗೆ ೨೫ ಎಕರೆ ಸ್ಥಳವನ್ನು ಗುರುತಿಸಲಾಗಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗ ಶಿಫಾರಸ್ಸುಗಳನ್ನು ಜಾರಿಗೆ ತಂದಿದ್ದು, ಇದರಿಂದ ನಮ್ಮ ಜಿಲ್ಲೆಯ ಒಟ್ಟು ೧೪ ಸಾವಿರ ಸರ್ಕಾರಿ ನೌಕರರಲ್ಲಿ ಸಂತಸ ಮೂಡಿದೆ ಎಂದರು.
ರಾಷ್ಟಿçÃಯ ಹೆದ್ದಾರಿ ೧೭೩ರಲ್ಲಿ ಮೂಗ್ತಿಹಳ್ಳಿಯಿಂದ ಮೂಡಿಗೆರೆವರೆಗೆ ೨೬ ಕಿ.ಮೀ. ಕಾಮಗಾರಿ ಪ್ರಾರಂಭಿಸಲು ಅಗತ್ಯ ಪ್ರಕ್ರಿಯೆಗಳು ಮುಗಿದಿದೆ. ಹಾಸನದಿಂದ-ಬೇಲೂರುವರೆಗೆ ರಾಷ್ಟಿçÃಯ ಹೆದ್ದಾರಿಯನ್ನು ವಿಸ್ತರಿಸುವ ಯೋಜನೆಯ ಟೆಂಡರ್ ಕಾರ್ಯ ಪೂರ್ಣಗೊಂಡಿದೆ. ಚಿಕ್ಕಮಗಳೂರಿನಿಂದ ಬೇಲೂರುವರೆಗೆ ರಾಷ್ಟಿçÃಯ ಹೆದ್ದಾರಿ ವಿಸ್ತರಣೆಯ ಪ್ರಸ್ತಾವನೆಗೆ ಡಿಪಿಆರ್ ತಯಾರಿಸಲು ಅನುಮೋದನೆ ನೀಡಲಾಗಿದೆ. ೧೯ ಕಿ.ಮೀ. ವಿಸ್ತೀರ್ಣದ ಚಿಕ್ಕಮಗಳೂರು ಬೈಪಾಸ್ ರಸ್ತೆಯನ್ನು ೪೦೦ ಕೋಟಿ ರೂ. ಮೊತ್ತದಲ್ಲಿ ಡಿಪಿಆರ್ ಸಿದ್ದಪಡಿಸಲು ಅನುಮೋದನೆ ದೊರಕಿದೆ. ೮೧ ಕಿ.ಮೀ ವಿಸ್ತೀರ್ಣದ ಮೂಡಿಗೆರೆ - ಬಾಣಾವರ ರಾಷ್ಟಿçÃಯ ಹೆದ್ದಾರಿ ೭೩ ಅನ್ನು ೧೨೧೩ ಕೋಟಿ ರೂ. ಗಳಿಗೆ ಡಿಪಿಆರ್ ಸಿದ್ದಪಡಿಸಲು ಅನುಮೋದನೆ ದೊರಕಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಆದ ಮಾನವ ಪ್ರಾಣ ಹಾನಿ, ಜಾನುವಾರು ಪ್ರಾಣ ಹಾನಿ ಮತ್ತು ಮನೆ ಹಾನಿಗಳಿಗೆ ಜಿಲ್ಲಾಡಳಿತದ ವತಿಯಿಂದ ಪರಿಹಾರ ಪಾವತಿಸುವ ಬಗ್ಗೆ ಸೂಕ್ತ ಕ್ರಮ ವಹಿಸಲಾಗುತ್ತಿದೆ. ಪ್ರಸಕ್ತ ಜುಲೈ ತಿಂಗಳಿನಲ್ಲಿ ಆದ ಆತಿವೃಷ್ಠಿಯಿಂದ ಒಟ್ಟು ೩೧.೯೭ ಕೋಟಿ ಮೌಲ್ಯದ ಆಸ್ತಿ-ಪಾಸ್ತಿ, ಸಾರ್ವಜನಿಕ ಕಟ್ಟಡಗಳು, ರಸ್ತೆಗಳು, ವಿದ್ಯುತ್ ಕಂಬಗಳು ಹಾನಿಯಾಗಿವೆ ಮತ್ತು ಒಬ್ಬರು ನಾಗರೀಕರು ಅತಿವೃಷ್ಠಿಯ ಕಾರಣಕ್ಕಾಗಿ ಬಲಿಯಾಗಿದ್ದಾರೆ. ಅವರ ಕುಟುಂಬಸ್ಥರಿಗೆ ಈಗಾಗಲೇ ೫ ಲಕ್ಷ ರೂಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆ ವಿವಿಧ ಶಾಲಾ, ಕಾಲೇಜು ಹಾಗೂ ಸಂಘ, ಸಂಸ್ಥೆಗಳ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ ಅಂಶುಮAತ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ, ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್, ಎಸ್ಪಿ ಡಾ.ವಿಕ್ರಮ ಅಮಟೆ, ಜಿಪಂ ಸಿಇಓ ಎಚ್.ಎಸ್.ಕೀರ್ತನಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net