ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹೋರಾಟ

Fighting with a black armband
Published on

ಹುನಗುಂದ: ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಸದಸ್ಯರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪಟ್ಟಣದ ತಾಲೂಕು ಆಡಳಿತ ಭವನದ ಆವರಣದಲ್ಲಿ ಸೋಮವಾರ ಎರಡನೇ ಹಂತದ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಕುಳಿತರು.

ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವುದು. ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವುದು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸುವುದು. ಅಂತರ್ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ 16ಎ ರ ಉಪಕಾಂಡ ಎರಡು ಮರು ಸ್ಥಾಪಿಸುವುದು ಅಥವಾ ಇತರ ಎಲ್ಲ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರಚಿಸುವುದು ಎಂದು ಬೇಡಿಕೆ ಇಟ್ಟಿದ್ದಾರೆ.

ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಸುಮಾರು 51.5 ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾಸುದಾರರ ಹೆಸರಿಗೆ ಪ್ರಮಾಣಪತ್ರ. ಮರಣ ಪ್ರಮಾಣಪತ್ರ ಮತ್ತು ಇತರ ದಾಖಲೆಗಳಿಲ್ಲದೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಚಾಲನೆ ನೀಡುತ್ತಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಗ್ರಾಮ ಆಡಳಿತ ಅಧಿಕಾರಗಳು ನಡೆಸುತ್ತಿರುವ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಂಗಮೇಶ ಪಾಟೀಲ ಬೆಂಬಲ ನೀಡಿದರು.

ಗ್ರಾಮ ಲೆಕ್ಕಾಧಿಕಾರಿಗಳಾದ ಶಿವಾನಂದ ಕುಂಬಾರ, ವಿ.ಎನ್. ಮೇಟಿ, ಸುರೇಶ ಹುದ್ದಾರ, ಮಂಜುನಾಥ್ ಲದಿನ್ನಿ, ರಾಜು ಹಗ್ಗದ, ಸಾವಿತ್ರಿ ಸಜ್ಜನ, ರೇಷ್ಮಾ ಗಣಪೂರಿ, ಶಶಿಕಲಾ ಗುಡಿಕಟ್ಟಿ, ವಿ.ಪಿ.ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net