ಗೋಡ್ಸೆ ಭಾವಚಿತ್ರ ಪ್ರದರ್ಶಿಸಿದವರ ವಿರುದ್ಧ ಪ್ರಕರಣ ದಾಖಲು

CTD GUDSE 11
Published on

ಚಿತ್ರದುರ್ಗ: ವಿಎಚ್‌ಪಿ, ಬಜರಂಗಳದಿಂದ ನಗರದಲ್ಲಿ ಪ್ರತಿಷ್ಠಾಪಿಸಿದ್ದ ಹಿಂದು ಮಹಾಗಣಪತಿ ಶೋಭಾಯಾತ್ರೆ ವೇಳೆ ನಾತೂರಾಂ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿದ್ದ ಕೆಲವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.8ರಂದು ಶೋಭಾಯಾತ್ರೆ ವೇಳೆ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ -ನೆಮ್ಮದಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ಗೋಡ್ಸೆ ಭಾವಚಿತ್ರ ಪ್ರದರ್ಶಿಸಲಾಗಿದೆ. ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ಅ.9ರಂದು ಪೊಲೀಸರಿಗೆ ದೂರು ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net