

ಶನಿವಾರಸಂತೆ: ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಪ್ರಕರಣವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಖಂಡಿಸಿದೆ.
ಇದೊಂದು ದಲಿತ ವಿರೋಧಿ ಹಾಗೂ ಸಂವಿಧಾನ ವಿರೋಧಿ ಕೃತ್ಯವಾಗಿದ್ದು ಕೇಂದ್ರ ಸರ್ಕಾರ ಕೂಡಲೇ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕೆಂದು ವಿಭಾಗದ ಮಾಧ್ಯಮ ವಕ್ತಾರ ಡಿ.ಆರ್.ವೇದಕುಮಾರ್ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ದಲಿತರು ಉನ್ನತ ಸ್ಥಾನದಲ್ಲಿರುವುದನ್ನು ಸಹಿಸದ ಇಂಥ ಕೀಳು ಹಾಗೂ ವಿಕೃತ ಮನಸು ಸಮಾಜಕ್ಕೆ ಮಾರಕ. ಆದ್ದರಿಂದ ಈ ಪ್ರಕರಣದಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಿಸಿ ವಕೀಲ ರಾಕೇಶ್ ಕಿಶೋರ್‌ನ ನಡೆ ದೇಶದ್ರೋಹದ ಪ್ರಕರಣ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.