ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

Published on

ಚಾಮರಾಜನಗರ: ಕೊಳ್ಳೇಗಾಲದಲ್ಲಿ ಅಪ್ರಾಪ್ತೆ ವಿವಾಹವಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಬ್ದುಲ್ ಕಲಾಂ ಎಂಬಾತ ಅಪ್ರಾಪ್ತೆಯನ್ನು ವಿವಾಹವಾದ ಆರೋಪಿಯಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತಾಯಿ-ಮಗು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ. ಚಿಕಿತ್ಸೆ ಬಳಿಕ ಇವರಿಬ್ಬರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ವರ್ಗಾಯಿಸುವುದಾಗಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಕರಣ ವಿವರ: ಆರೋಪಿ ಅಬ್ದುಲ್ ಕಲಾಂ 2023 ಜು.7ರಂದು ಅಪ್ರಾಪ್ತೆಯನ್ನು ವಿವಾಹವಾಗಿ ಪಟ್ಟಣದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸಂಸಾರ ಆರಂಭಿಸಿದ್ದು, ಬಾಲಕಿ 2 ತಿಂಗಳಿಗೆ ಗರ್ಭಿಣಿ ಆಗಿದ್ದು, ಮೇ 8ರಂದು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ಬಂದ ವೇಳೆ 18 ವರ್ಷದ ಮೊದಲೇ ಮದುವೆ ಆಗಿದ್ದಳು ಎಂಬುದು ತಿಳಿದು ಬಂದಿದೆ. ಬಳಿಕ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net