ಅಕ್ರಮ ಮರಳು ಸಾಗಾಟಗಾರರ ಮೇಲೆ ದೂರು ದಾಖಲು

crime
Published on

ಹುಬ್ಬಳ್ಳಿ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರ ವಿರುದ್ಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಸಲೀಂ ಮುಲ್ಲಾ, ರಾಜೇಸಾಬ್ ಜಾಲಿಹಾಳ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಗದಗ ಕಡೆಯಿಂದ ಹುಬ್ಬಳ್ಳಿಗೆ ಸಾಗಾಟ ಮಾಡುತ್ತಿದ್ದ 5.20 ಲಕ್ಷ ರೂ. ಮೌಲ್ಯದ ಲಾರಿ ಮತ್ತು ಮರಳು ಜಪ್ತಿ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net