ಐವಾನ್ ಡಿಸೋಜ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

ex minister mahesh kollegala
ಮಾಜಿ ಸಚಿವ ಮಹೇಶ್ ಕೊಳ್ಳೇಗಾಲ
Published on

ಶಿವಮೊಗ್ಗ: ಎಂಎಲ್‌ಸಿ ಐವಾನ್ ಡಿಸೋಜ ಬಾಂಗ್ಲಾದೇಶಕ್ಕೆ ಬಂದ ಗತಿ ನಮಗೂ ಬರುತ್ತದೆಂದು ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದಾರೆ. ದೇಶ ವಿರೋಧಿ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಮಹೇಶ್ ಕೊಳ್ಳೇಗಾಲ ಆಗ್ರಹಿಸಿದರು.

ರಾಜಭವನಕ್ಕೆ ನುಗ್ಗಿ ತಮ್ಮನ್ನು ಓಡಿಸುವ ಕೆಲಸ ಮಾಡುತ್ತೇವೆಂದು ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಆಡಳಿತದ ಗೂಂಡಾ ಪ್ರವೃತ್ತಿ ಇದಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯಪಾಲರೇ ಹೊಣೆ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕೆಲಸ. ಅದನ್ನು ಬಿಟ್ಟು ಕಾನೂನು ಸುವ್ಯವಸ್ಥೆ ಹದಗೆಡಿಸುತ್ತೇವೆಂದು ಹೇಳಿಕೆ ನೀಡಿ ರಾಜ್ಯಪಾಲರ ಮೇಲೆ ಒತ್ತಡ ತರುವ ಪ್ರಯತ್ನ ಮಾಡಬಾರದು. ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net