ವಿಶ್ವ ಮೂಲವ್ಯಾಧಿ ದಿನ ಆಚರಣೆ, ವಿಶೇಷ ಸಲಹೆ ಚಿಕಿತ್ಸಾ ಶಿಬಿರ ಉದ್ಘಾಟನೆ

IMG_20241120_210101_387.jpg
Published on

ಹುಬ್ಬಳ್ಳಿ: ಇಲ್ಲಿಯ ಹೆಗ್ಗೇರಿ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯ ಶಲ್ಯತಂತ್ರ ವಿಭಾಗ ಹಾಗೂ ಹಿಮಾಲಯ ಡ್ರಗ್ಸ್ ಕಂಪನಿ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವ ಮೂಲವ್ಯಾಧಿ ದಿನ ಆಚರಿಸಲಾಯಿತು.

ಮೂಲವ್ಯಾಧಿ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಲಾಯಿತು. ಪಥ್ಯಾಪಥ್ಯದ ಬಗ್ಗೆ ಮಾಹಿತಿ ಕೈಪಿಡಿ ಅನಾವರಣಗೊಳಿಸಲಾಯಿತು. ರೋಗದ ಕಾರಣಗಳು ಲಕ್ಷಣಗಳು, ಚಿಕಿತ್ಸಾ ಪದ್ಧತಿ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಖಜಾಂಚಿ ಎಸ್.ಆರ್. ಮಾಮಲೆದೇಶಪಾಂಡೆ, ಪ್ರಾಚಾರ್ಯ ಡಾ. ಪ್ರಶಾಂತ ಎ.ಎಸ್., ಶಲ್ಯ ತಂತ್ರ ವಿಭಾಗದ ಮುಖ್ಯಸ್ಥ ಡಾ. ಸಿ. ತ್ಯಾಗರಾಜ, ಇತರ ಸಿಬ್ಬಂದಿ ಉಪಸ್ಥಿತರಿದ್ದರು.

ತಪಾಸಣಾ ಶಿಬಿರ:
ದಿನಾಚರಣೆ ನಿಮಿತ್ತ ನ. 25ರ ವರೆಗೆ ನಿತ್ಯ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಮೂಲವ್ಯಾಧಿ ರೋಗದ ಬಗ್ಗೆ ಜಾಗೃತಿ ಮತ್ತು ವಿಶೇಷ ತಪಾಸಣೆ, ಸಲಹಾ ಶಿಬಿರ ಏರ್ಪಡಿಸಲಾಗಿದೆ. ಆಸಕ್ತರು ಶಿಬಿರದ ಸದುಪಯೋಗಪಡಿಸಿಕೊಳ್ಳಲು ಶಲ್ಯತಂತ್ರ ವಿಭಾಗದ ಮುಖ್ಯಸ್ಥ ಡಾ. ಸಿ. ತ್ಯಾಗರಾಜ ಹಾಗೂ ಪ್ರಾಚಾರ್ಯ ಡಾ. ಪ್ರಶಾಂತ ಎ.ಎಸ್. ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net