

ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿ
ಅವಿರೋಧವಾಗಿ ಆಯ್ಕೆಯಾಗಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇವರಿಗೆ ಸಹಕಾರಿ ಬಂಧುಗಳಿಂದ ಅಭಿನಂದನಾ ಸಮಾರಂಭ ಸೆ.24ರಂದು ಮಧ್ಯಾಹ್ನ 12ಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆ ವಹಿಸಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಲಿದ್ದಾರೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಗುರುವಾರ
ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ನಗರದ
ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಶುಭಾಶಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೌತ್ ಇಂಡಿಯಾ ಅದಾನಿ ಗ್ರೂಪ್ಸ್‌ನ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ
ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.