ಆದಾಯ ತೆರಿಗೆ ಸಲ್ಲಿಸುವುದು ಪ್ರತಿಯೊಬ್ಬರ ಜವಾಬ್ದಾರಿ; ವೈ.ಎಸ್. ಜನವಾಡ

LECTURER IN COMERS DEPT KSWU
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸವನ್ನು ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಉದ್ಘಾಟಿಸಿದರು. ಪ್ರೊ. ಮಲ್ಲಿಕಾರ್ಜುನ ಎನ್.ಎಲ್, ಡಾ. ಗಣೇಶ್ ಎಸ್.ಆರ್ ಮತ್ತಿತರರಿದ್ದಾರೆ.
Published on

ವಿಜಯಪುರ: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಹೇಳಿದರು.

ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಸೋಮವಾರ ಆಯೋಜಿಸಿದ್ದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರಿಗೂ ಹಂತ-ಹಂತದ ಒಳನೋಟಗಳು ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

ಆದಾಯ ತೆರಿಗೆ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತಿವೆ. ಇ-ಫೈಲಿಂಗ್ ಮಾಡುವ ವೇಳೆ ನಿಖರವಾದ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದು ಅತ್ಯಂತ ಅಗತ್ಯ. ಯಾವುದೇ ತಪ್ಪುಗಳಿಲ್ಲದಂತೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ಮಾತನಾಡಿ, ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಗೆ ಇಂತಹ ಪ್ರಯೋಗಾತ್ಮಕ ಕಾರ್ಯಕ್ರಮಗಳು ಅವಶ್ಯಕ. ವಿಶ್ವ ವಿದ್ಯಾನಿಲಯವು ಈ ನಿಟ್ಟಿನಲ್ಲಿ ಸದಾ ಪ್ರಯತ್ನಶೀಲವಾಗಿದೆ. ವಿದ್ಯಾರ್ಥಿಗಳು ಈ ಉಪನ್ಯಾಸದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಪ್ರಾಧ್ಯಾಪಕ ಡಾ. ಗಣೇಶ್ ಎಸ್.ಆರ್. ಸ್ವಾಗತಿಸಿದರು. ಡಾ.ಸಿ.ಎಂ. ಮಠಪತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net