

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ನೂತನವಾಗಿ ರಚಿತವಾದ ಹಿರಿಯ ವಿದ್ಯಾರ್ಥಿ ಸಂಘದ ಪ್ರಥಮ ಕಾರ್ಯಕಾರಿ ಸಮಿತಿ ಸಭೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಹಿರಿಯ ವಿದ್ಯಾರ್ಥಿ ಸಂಘ ಪದಾಽಕಾರಿಗಳ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ಡಾ.ಪ್ರಕಾಶ್ ಬಿ, ಉಪಾಧ್ಯಕ್ಷರಾಗಿ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಪಾವ್ಲ್ ಹೆರಾಲ್ಡ್ ಮಸ್ಕರೆನ್ಹಸ್, ದಿವ್ಯಾ ಕೆ, ಕಾರ್ಯದರ್ಶಿಯಾಗಿ ರಾಜ್ಯಶಾಸ್ತ್ರ ಉಪನ್ಯಾಸಕ ಭರತ್ಕುಮಾರ್ ಎ, ಖಜಾಂಚಿಯಾಗಿ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಫಿಲೋಮಿನಾ ಮೊಂತೆರೊ ಆಯ್ಕೆಯಾದರು.
ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಶೈಕ್ಷಣಿಕ ವರ್ಷದ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಸೂಚಿ ಬಗ್ಗೆ ಚರ್ಚಿಸಲಾಯಿತು. ಕಾಲೇಜಿನಲ್ಲಿ ನಡೆಯುವ ಶೈಕ್ಷಣಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಸಂಪೂರ್ಣ ಸಹಕಾರ ನೀಡುವುದಾಗಿ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ನೂತನ ಪದಾಽಕಾರಿಗಳು ಭರವಸೆ ನೀಡಿದರು. ಕಾರ್ಯದರ್ಶಿ ಭರತ್ಕುಮಾರ್ ಎ. ಕಾರ್ಯಕ್ರಮ ನಿರೂಪಿಸಿದರು.