ಉತ್ತಮ ನಾಯಕತ್ವಕ್ಕೆ ಅಗತ್ಯ ಆತ್ಮವಿಶ್ವಾಸ - ರೆ.ಫಾ. ಲಾರೆನ್ಸ್ ಮಸ್ಕರೇನಸ್ ಹೇಳಿಕೆ

PTR_15 JUN_6
Published on


ಪುತ್ತೂರು: ಆತ್ಮವಿಶ್ವಾಸದ ಕೊರತೆಯಿರುವ ವ್ಯಕ್ತಿ ಎಂದಿಗೂ ಉತ್ತಮ ನಾಯಕನಾಗಲು ಸಾಧ್ಯವಿಲ್ಲ. ತನ್ನನ್ನು ಇತರರು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಆತ್ಮವಿಶ್ವಾಸವನ್ನು ಹೊಂದಿರಬೇಕು. ನಾಯಕನು ತನ್ನ ನಿರ್ಧಾರಗಳು ಮತ್ತು ಕಾರ್ಯಗಳಲ್ಲಿ ವಿಶ್ವಾಸ ಹೊಂದಿರಬೇಕು ಎಂದು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ಫಾ. ಲಾರೆನ್ಸ್ ಮಸ್ಕರೇನಸ್ ಹೇಳಿದರು.


ಶನಿವಾರ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.


ಅಧ್ಯಕ್ಷತೆ ವಹಿಸಿದ ಮಂಗಳೂರಿನ ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ ಇರುವ ಸಂಪತ್ತು, ಬುದ್ಧಿವಂತಿಕೆ, ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳುವ ಕೌಶಲವನ್ನು ರೂಢಿಸಿಕೊಳ್ಳಬೇಕು. ನಮ್ಮ ಯಶಸ್ಸಿನ ಗುಟ್ಟು ಪರಿಶ್ರಮದಲ್ಲಿ ಅಡಗಿದೆ. ನಮ್ಮ ಬದುಕಿನ ಶಿಲ್ಪಿ ನಾವೇ ಆಗಬೇಕು. ಆ ಮೂಲಕ ಸುಂದರವಾಗಿ ಬದುಕನ್ನು ವಿನ್ಯಾಸಗೊಳಿಸಿ ಸ್ವಾವಲಂಬಿಗಳಾಗಬಹುದು. ಗುರಿ ಸಾಧನೆಗೆ ನಮ್ಮದೇ ದಾರಿ ಕಂಡುಕೊಳ್ಳಬೇಕು ಎಂದು ತಿಳಿಸಿದರು.


ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಽಕಾರಿಗಳನ್ನು ಡಾ. ಪ್ರವೀಣ್ ಲಿಯೋ ಲಸ್ರದೋ ಹೂಗುಚ್ಛ ನೀಡಿ ಅಭಿನಂದಿಸಿದರು. ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಕಿತಾ ಎಲ್.ಡಿ, ಕಾರ್ಯದರ್ಶಿ ಧ್ರುವ ಜೆ ಭಂಡಾರಿ, ಜತೆ ಕಾರ್ಯದರ್ಶಿ ಸೃದ್ಧನ್ ಆಳ್ವ ಕೆ ಸಹಿತ ತರಗತಿವಾರು ಪ್ರತಿನಿಽಗಳು, ವಿವಿಧ ಸಂಘಗಳ ಪದಾಽಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲ ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಮಾಣವಚನ ಬೋಽಸಿದರು.


ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ಟ, ಹಿರಿಯ ವಿದ್ಯಾರ್ಥಿ ಸಂಘದ ಪ್ರತಿಮಾ ಹೆಗ್ಡೆ ಉಪಸ್ಥಿತರಿದ್ದರು. ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಕಿತಾ ಎಲ್. ಡಿ. ಸ್ವಾಗತಿಸಿದರು. ಕಾರ್ಯದರ್ಶಿ ಧ್ರುವ ಜೆ. ಭಂಡಾರಿ ಅತಿಥಿಗಳನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಸೃದ್ಧನ್ ಆಳ್ವ ಕೆ ವಂದಿಸಿದರು. ವಿದ್ಯಾರ್ಥಿನಿ ಸಕೀನಾ ಐಮನ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net