ಸದಾನಂದ ಸುವರ್ಣ ಅವರಿಗೆ ಅಂತಿಮ ನಮನ

mng-july17-sadanadha suvarna2
ಆಗಲಿದ ರಂಗಕರ್ಮಿ, ಸಿನಿಮಾ ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ಅವರಿಗೆ ಮಂಗಳೂರು ಪುರಭವನದಲ್ಲಿ ಬುಧವಾರ ಅಂತಿಮ ನಮನ ಸಲ್ಲಿಸಲಾಯಿತು. ದ.ಕ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮೃತರ ಅಂತಿಮ ದರ್ಶನ ಪಡೆದರು.
Published on

ಮಂಗಳೂರು: ಆಗಲಿದ ರಂಗಕರ್ಮಿ, ಸಿನಿಮಾ ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ಅವರಿಗೆ ಮಂಗಳೂರು ಪುರಭವನದಲ್ಲಿ ಬುಧವಾರ ಅಂತಿಮ ನಮನ ಸಲ್ಲಿಸಲಾಯಿತು.

ಸುವರ್ಣ ಅವರ ಮೃತದೇಹವನ್ನು ಪುರಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ದ.ಕ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮೃತರ ಅಂತಿಮ ದರ್ಶನ ಪಡೆದರು.ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಪಾಲಿಕೆ ಸದಸ್ಯ ನವೀನ್ ಡಿಸೋಜಾ, ಕಾಂಗ್ರೆಸ್ ನಾಯಕ ಹರೀಶ್ ಕುಮಾರ್, ಪ್ರಮುಖರಾದ ಡಾ. ಚಿನ್ನಪ್ಪ ಗೌಡ, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ಸದಾನಂದ ಸುವರ್ಣ ಅವರ ಇಚ್ಚೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಸದಾನಂದ ಸುವರ್ಣ ಅವರು 1931 ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದುಕೊಟ್ಟಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net