ಗೋಕಾಕ: ಕೊನೆಗೂ ಉದ್ಘಾಟನೆಯಾದ ಇಂದಿರಾ ಕ್ಯಾಂಟೀನ್

h27-Indira Canteen 1
Published on

ಗೋಕಾಕ: ನಗರದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಯಾವಾಗ ಎಂಬ ಪ್ರಶ್ನೆಗೆ ಮಂಗಳವಾರ ಉತ್ತರ ಸಿಕ್ಕಿದೆ.
ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಕ್ಯಾಂಟೀನ್ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, ಕರೊನಾ ಕಾರಣ ಬಡವರಿಗೆ ಉಚಿತ ಆಹಾರ ವಿತರಿಸುವ ಉದ್ದೇಶದಿಂದ ಕ್ಯಾಂಟೀನ್ ಆರಂಭಿಸಲಾಗಿದೆ. ಸದುಪಯೋಗ ಪಡೆಯಬೇಕು. ಕರೊನಾ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.

ಎರಡು ವರ್ಷಗಳಿಂದ ಸಿಗದ ಉದ್ಘಾಟನೆ ಭಾಗ್ಯ: ಈ ಕ್ಯಾಂಟೀನ್ ನಿರ್ಮಾಣ ಗುತ್ತಿಗೆಯನ್ನು ತಮಿಳುನಾಡು ಮೂಲದ ಗುತ್ತಿಗೆದಾರನಿಗೆ ನೀಡಲಾಗಿತ್ತು. ಗುತ್ತಿಗೆದಾರ 64 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷ ಪೂರ್ಣಗೊಂಡಿತ್ತು. ಆದರೆ, ಉದ್ಘಾಟನೆ ಮಾತ್ರ ಆಗಿರಲಿಲ್ಲ. ಕ್ಯಾಂಟೀನ್ ಉದ್ಘಾಟನೆಗೆ ಬಡವರು, ಕೂಲಿಕಾರ್ಮಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಿಪಂ ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಸದಸ್ಯ ಎಸ್.ಎ.ಕೊತವಾಲ, ಪೌರಾಯುಕ್ತ ಶಿವಾನಂದ ಹಿರೇಮಠ, ಎಂ.ಎಚ್.ಗಜಾಕೋಶ, ವಿ.ಎಸ್.ತಡಸಲೂರು, ಜಯೇಶ ತಾಂಬೂಳೆ ಸೇರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net