ದಾಖಲೆ ಪರಿಶೀಲಿಸಿ ಹಣ ಬಿಡುಗಡೆ: ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಹೇಳಿಕೆ

Finance Committee meeting mandya
Published on

ಮಂಡ್ಯ: ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಸಂಬಂಧಿಸಿದಂತೆ ದಾಖಲೆ ಪಡೆದು ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಹಣ ಬಿಡುಗಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಷಿಪ್ರ ಸಂಚಾರ ದಳ, ಸ್ಥಾಯಿ ಕಣ್ಗಾವಲು ತಂಡ, ಪೊಲೀಸ್ ತಂಡ ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೆ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಲಾತಿಗಳನ್ನು ಪಡೆಯಲಾಗುವುದು ಎಂದರು.

ಸಮಿತಿ ಎದುರು 7 ಪ್ರಕರಣಗಳಿದ್ದು, ಈ ಪೈಕಿ ಈಗಾಗಲೇ 3 ಪ್ರಕರಣ ಇತ್ಯರ್ಥಪಡಿಸಲಾಗುವುದು. ಮೇ.3 ರಂದು 4 ಪ್ರಕರಣಗಳಿಗೆ ಸಂಬಂಧಿಸಿದಂತೆ ಹಣ ವಶಪಡಿಸಿಕೊಂಡಿರುವ ವ್ಯಕ್ತಿಗಳಿಗೆ ನೋಟೀಸ್ ಜಾರಿ ಮಾಡಿ ದಾಖಲಾತಿಗಳನ್ನು ಸಲ್ಲಿಸಲು ತಿಳಿಸಲಾಗಿತ್ತು. ಅವರು ಸಲ್ಲಿಸುವ ದಾಖಲಾತಿಗಳನ್ನು ಪರಿಶೀಲಿಸಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಲೆಕ್ಕಾಧಿಕಾರಿ ಚಂದ್ರಶೇಖರ್, ಜಿಲ್ಲಾ ಖಜನಾಧಿಕಾರಿ ಸಿದ್ದಲಿಂಗಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net