ಫೈನಾನ್ಸ್​ನವರು ಬೈಕ್​ ತೆಗೆದುಕೊಂಡು ಹೋಗಿದ್ದಕ್ಕೆ ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ಕಂತು ಕಟ್ಟಿಲ್ಲವೆಂಬ ಕಾರಣಕ್ಕೆ ಫೈನಾನ್ಸ್​ನವರು ಬೈಕ್​ ತೆಗೆದುಕೊಂಡು ಹೋದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಪ್ರವಿಣ ರಾಮಪ್ಪ ಕಟ್ಟೆವರ (22) ಮೃತ ಯುವಕ.

ಈತನ ಬೈಕ್​ಅನ್ನು ಕಂತು ಕಟ್ಟಿಲ್ಲವೆಂದು ಫೈನಾನ್ಸ್​ನವರು ತೆಗೆದುಕೊಂಡು ಹೋಗಿದ್ದರು. ಇದರಿಂದ ಮನನೊಂದ ಪ್ರವಿಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net