

ಬೆಳ್ತಂಗಡಿ: ರಾಷ್ಟ್ರೀಯಮಟ್ಟದ ವೇಯ್ಟಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳುವ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ, ಬಂದಾರು ಗ್ರಾಮದ ಕೆ.ತೇಜಸ್ವಿನಿ ಪೂಜಾರಿ ಅವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಮಂಗಳವಾರ ಆರ್ಥಿಕ ನೆರವು ನೀಡಿ ಶುಭ ಹಾರೈಸಲಾಯಿತು.
ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜತೆಕಾರ್ಯದರ್ಶಿ ಸಂತೋಷ್ ಉಪ್ಪಾರು, ವಿದ್ಯಾರ್ಥಿನಿಯ ತಂದೆ ಕೆ.ಚಿದಾನಂದ ಪೂಜಾರಿ ಉಪಸ್ಥಿತರಿದ್ದರು.