ಮೃತ ಅಯ್ಯಪ್ಪ ಮಾಲಾಧಾರಿ ಕುಟುಂಬಗಳಿಗೆ ಆರ್ಥಿಕ ನೆರವು

New Dharmasthala New
Published on

ಹುಬ್ಬಳ್ಳಿ : ಇಲ್ಲಿನ ಉಣಕಲ್ಲನ ಅಚ್ಚವ್ವನ ಕಾಲನಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೃತಪಟ್ಟ ಎಂಟು ಹಾಗೂ ಓರ್ವ ಗಾಯಾಳು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತಲಾ 50 ಸಾವಿರ ರೂ.ಗಳಂತೆ ಒಟ್ಟು 4.50 ಲಕ್ಷ ರೂ. ಧನ ಸಹಾಯ ಮಂಜೂರು ಮಾಡಿದ್ದಾರೆ.

ಮಂಜೂರಾದ ಧನಸಹಾಯದ ಚೆಕ್​ಗಳನ್ನು ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಮಾಜಿ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಹಾಗೂ ಧಾರವಾಡ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಅವರು ವಿತರಿಸಿದರು.

ಧಾರವಾಡ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ವಸಂತ ಅರ್ಕಾಚಾರಿ, ಪ್ರದೀಪ ಶೆಟ್ಟಿ, ಸಂತೋಷ ಶೆಟ್ಟಿ, ಸೋಮಲಿಂಗ ಕೆ., ಮಂಜುಳಾ ಎಸ್. ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net