

ಕವಿತಾಳ: ಗೃಹಲಕ್ಷ್ಮಿಯೋಜನೆ ಅನುಷ್ಠಾನದ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಗ್ರಾಪಂ ಅಧ್ಯಕ್ಷ ಮೌನೇಶ ದೊಡ್ಡಮನಿ ಹೇಳಿದರು. ಅಮೀನಗಡದ ಗಂಗಾದೇವಿ ದೇವಸ್ಥಾನದ ಆವರಣದಲ್ಲಿ ಗ್ರಾಪಂನಿಂದ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆ ವರ್ಚುವಲ್ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆ ಅತ್ಯುಪಯುಕ್ತವಾಗಿದೆ. ಸರ್ಕಾರ ನೀಡುವ 2 ಸಾವಿರ ರೂಪಾಯಿಯಿಂದ ಮಹಿಳೆಯರ ಆರ್ಥಿಕ ಸಮಸ್ಯೆ ನಿವಾರಣೆಯಾಗಲಿದೆ ಎಂದರು.