

ಕೋಲಾರ: ಬಡ್ಡಿಗೆ ಹಣ ಕೊಟ್ಟ ಫೈನಾನ್ಸಿಯರ್ ನೇಣಿಗೆ ಗೋಣೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಬಡ್ಡಿ ವ್ಯವಹಾರ ನಡೆಸುತ್ತಿದ್ದ ಸಂತೋಷ್ ಮೊದಲಿಯಾರ್ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೋಲಾರ ಜಿಲ್ಲೆಯ ಬಂಗಾರಪೇಟೆಯ ನ್ಯೂಟೌನ್ನಲ್ಲಿ ಈ ಪ್ರಕರಣ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾನೆ. ಹಣದ ಲೇವಾದೇವಿಯಲ್ಲಿ ನಷ್ಟವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.