ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ

31_10_Mdy_Chirathe
Published on

ಮಂಡ್ಯ: ತಾಲೂಕಿನ ಬಿ.ಹೊಸೂರು ಗ್ರಾಮದಲ್ಲಿ ಶನಿವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಗ್ರಾಮದ ವಿನಯ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮರಿಗಳು ಕಾಣಿಸಿಕೊಂಡಿದೆ. ಅವುಗಳನ್ನು ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಆದರೆ ಮರಿ ಸಿಕ್ಕಿರುವುದರಿಂದ ತಾಯಿ ಚಿರತೆ ಕೂಡ ಸುತ್ತಮುತ್ತಲಿನ ಜಾಗದಲ್ಲಿ ಇರಬಹುದೆಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net