ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ ಚುರುಕು: ಮಂಡ್ಯ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ

1 (1)
Published on

ಮಂಡ್ಯ: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನ ಹೊಡೆದಾಕಬೇಕೆಂದು ಹೇಳಿಕೆ ನೀಡಿದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಮೈಸೂರಿನ ದೇವರಾಜ ಠಾಣೆ ಪೊಲೀಸರು ಪ್ರಕರಣ ಚುರುಕುಗೊಳಿಸಿದ್ದಾರೆ. ಅದರಂತೆ ತಾಲೂಕಿನ ಸಾತನೂರು ಕಂಬದ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಮಹಜರ್ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆ.14ರಂದು ಸಾತನೂರು ಕಂಬದ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಬೂತ್‌ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅಶ್ವತ್ಥನಾರಾಯಣ ಅವರು ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದರು. ಈ ಕುರಿತು ಕಾನೂನು ಕ್ರಮಕ್ಕೆ ಒತ್ತಾಯಿಸಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮೈಸೂರಿನ ದೇವರಾಜ ಠಾಣೆಗೆ ದೂರು ನೀಡಿದ್ದರು. ಅದರಂತೆ ಎಫ್‌ಐಆರ್ ಕೂಡ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಮಹಜರ್ ನಡೆಸಿ ಕೆಲ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಮಯದಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹಾಗೂ ಜಿಲ್ಲಾ ವಕ್ತಾರ ಸಿ.ಎಂ.ದ್ಯಾವಪ್ಪ ಹಾಜರಿದ್ದರು. ಅಂತೆಯೇ ಪ್ರಕರಣವನ್ನು ಮಂಡ್ಯ ಗ್ರಾಮಾಂತರ ಠಾಣೆಗೆ ವರ್ಗಾಯಿಸಿದ್ದಾರೆ. ಇದರ ಬೆನ್ನಲ್ಲೇ ಮಂಡ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net