

ಧಾರವಾಡ: ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳುವ ಮಾಲೀಕ ಹಾಗೂ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಅಂದಾಗ ಬಾಲಕಾರ್ಮಿಕ ಪದ್ಧತಿ ನಿಯಂತ್ರಣವಾಗುತ್ತದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಮತ್ತು ಟಾಸ್ಟ್ಫೋರ್ಸ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಸಭೆ ಮತ್ತು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಣ್ಣ, ಮಧ್ಯಮ ಉದ್ಯಮಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ, ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಕಾರ್ಮಿಕ ಇಲಾಖೆ ಅಽಕಾರಿಗಳು ಇಟ್ಟಿಗೆ ಭಟ್ಟಿ, ಹೋಟೆಲ್, ಬೇಕರಿ, ಖಾನಾವಳಿ, ಇತರ ಉದ್ಯಮ ಸ್ಥಳಗಳ ಮೇಲೆ ನಿರಂತರ ದಾಳಿ ಮಾಡಿ ಮಕ್ಕಳನ್ನು ರಕ್ಷಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಽÃಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಮಾತನಾಡಿ, ಮಕ್ಕಳ ಭಿಕ್ಷಾಟನೆಯನ್ನು ನಿಯಂತ್ರಿಸಬೇಕು. ಪ್ರತಿಭಟನೆ, ಚಳವಳಿಗಳಲ್ಲಿ ಅನಗತ್ಯವಾಗಿ ಶಾಲಾ- ಕಾಲೇಜು ಮಕ್ಕಳ ಬಳಕೆ ಆಗುತ್ತಿದೆ. ಇದನ್ನು ನಿಲ್ಲಿಸಬೇಕು ಎಂದರು.
ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಸಂಗಮ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕರ ಪತ್ತೆಗಾಗಿ ಕಳೆದ ವರ್ಷ 61 ಅನಿರೀಕ್ಷಿತ ದಾಳಿ ನಡೆಸಲಾಗಿದೆ. ಪ್ರಸಕ್ತ ವರ್ಷ 7 ಪ್ರಕರಣ ದಾಖಲಿಸಿ 1.10 ಲಕ್ಷ ರೂಪಾಯಿ ದಂಡ ವಿಽಸಲಾಗಿದೆ ಎಂದರು.
ಜಿಲ್ಲಾ ಬಾಲಕಾರ್ಮಿಕ ಸಂಘದ ಯೋಜನಾ ಅಽಕಾರಿ ಬಸವರಾಜ ಪಂಚಾಕ್ಷರಿಮಠ, ಉಪ ವಿಭಾಗಾಽಕಾರಿ ಶಾಲಂ ಹುಸೇನ್, ಡಿಡಿಪಿಐ ಎಸ್.ಎಸ್. ಕೆಳದಿಮಠ ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳಿದ್ದರು.