ತೇಗೂರ ಗ್ರಾಮದಲ್ಲಿ ನಕಲಿ ವೈದ್ಯನ ವಿರುದ್ಧ ಎಫ್‌ಐಆರ್

11 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ತೇಗೂರ ಗ್ರಾಮದಲ್ಲಿ ಸುಮಾರು ಒಂದೂವರೆ ವರ್ಷದಿಂದ ಕ್ಲಿನಿಕ್ ತೆರೆದು ಸಾರ್ವಜನಿಕರನ್ನು ಉಪಚರಿಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಆರೋಗ್ಯ ಇಲಾಖೆ ಕಾನೂನು ಕ್ರಮ ಜರುಗಿಸಿದೆ.
ಮಂಜುನಾಥ ಇಳಿಗೇರ ಎಂಬಾತನ ಕ್ಲಿನಿಕ್ ಮೇಲೆ ಡಿಎಚ್‌ಒ ಡಾ. ಶಶಿ ಪಾಟೀಲ ಹಾಗೂ ತಂಡ ದಾಳಿ ನಡೆಸಿದೆ. ಈ ವೇಳೆ ಮಂಜುನಾಥ ವೈದ್ಯಕೀಯ ವ್ಯಾಸಂಗ ಮಾಡದೆ, ಪ್ರಮಾಣಪತ್ರವೂ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದುದು ಪತ್ತೆಯಾಗಿದೆ. ಆದರೂ ಮಂಜುನಾಥ ಅಲೋಪಥಿಕ್ ಔಷಽಗಳನ್ನು ಉಪಯೋಗಿಸುತ್ತ, ಸಲಾಯಿನ್‌ಗಳನ್ನು ಹಚ್ಚುತ್ತಿರುವುದು ಕಂಡು ಬಂದಿದೆ. ದಾಳಿ ವೇಳೆ ಕೆಲ ರೋಗಿಗಳನ್ನು ದಾಖಲು ಮಾಡಿಕೊಂಡು ಉಪಚರಿಸುತ್ತಿರುವುದು ಬೆಳಕಿಗೆ ಬಂದಿದೆ.
ಕ್ಲಿನಿಕ್ ಜಪ್ತಿ ಮಾಡಿರುವ ಡಿಎಚ್‌ಒ ಡಾ. ಶಶಿ ಪಾಟೀಲ, ನಕಲಿ ವೈದ್ಯನ ವಿರುದ್ಧ ದೂರು ದಾಖಲಿಸಿದ್ದಾರೆ. ಕ್ಲಿನಿಕ್‌ಗೆ ಬಂದಿದ್ದ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂದು ಸೂಚಿಸಿದರು.
ತಾಲೂಕು ವೈದ್ಯಾಽಕಾರಿ ಡಾ. ತನುಜಾ ಕೆ.ಎನ್. ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net