ಫೇಕ್ ಅಧಿಕಾರಿ ವಿರುದ್ಧ ಕೇಸ್:
ಪ್ರಮೋಷನ್‌ಗಾಗಿ ಖೊಟ್ಟಿ ದಾಖಲೆ ಸಲ್ಲಿಸಿದ ಉಮೇಶಗೌಡ

IMG_20220914_085521.jpg
Published on

ಹೊಸಪೇಟೆ: ಸರ್ಕಾರಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿ ನೌಕರಿಯಲ್ಲಿ ಮುಂಬಡ್ತಿ ಪಡೆದಿದ್ದ ಅಧಿಕಾರಿಯೊಬ್ಬರ ವಿರುದ್ಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಉಮೇಶಗೌಡ ವೆಂಕನಗೌಡರ್(೪೩) ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿ ಈ ಹಿಂದೆ ಅದೇ ಕಚೇರಿಯಲ್ಲಿ ಸಹಾಯಕ ಸಾಂಖಿಕ ಅಧಿಕಾರಿಯಾಗಿದ್ದರು. ಸೇವೆಯಲ್ಲಿ ಮುಂಬಡ್ತಿ ಪಡೆಯುವ ದುರುದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತ ಗಂಗೋತ್ರಿ, ಮೈಸೂರು ಹೆಸರಲ್ಲಿ ೨೦೦೭, ೨೦೦೮, ೨೦೦೯ನೇ ಸಾಲಿನ ಬಿಎ ಪದವಿಯ ನಕಲಿ ಅಂಕಪಟ್ಟಿ, ಪಾಸಿಂಗ್ ಸರ್ಟಿಫಿಕೇಟ್ ಮತ್ತು ಮೈಗ್ರೇಷನ್ ಪ್ರಮಾಣ ಪತ್ರಗಳನ್ನು ಸೃಷ್ಟಿಸಿದ್ದರು. ಅವುಗಳನ್ನು ಆರ್ಥಿಕ ಮತ್ತು ಸಾಂಖಿಕ ನಿರ್ದೇಶನಾಲಯಕ್ಕೆ ಸಲ್ಲಿಸಿ, ತಾಲೂಕು ಯೋಜನಾಧಿಕಾರಿಯಾಗಿ ಮುಂಬಡ್ತಿ ಪಡೆದಿದ್ದರು. ಈ ಮುಲಕ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶೈಲಾ ನೀಡಿದ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net