ಶಾಸಕ ವೇದವ್ಯಾಸ ಕಾಮತ್ ವಿರುದ್ದದ ಎಫ್‌ಐಆರ್ ರದ್ದು

ಶಾಸಕ ವೇದವ್ಯಾಸ ಕಾಮತ್
ಶಾಸಕ ವೇದವ್ಯಾಸ ಕಾಮತ್
Published on
ಮಂಗಳೂರು: ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಕಳೆದ ವರ್ಷ ಮಾರ್ಚ್ ನಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಶಾಸಕರ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಶಾಸಕರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು.
ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, ಇದೊಂದು ರಾಜಕೀಯ ಪ್ರೇರಿತ ದುರುದ್ದೇಶದ ಪ್ರಕರಣವಾಗಿತ್ತು. ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಅನಂತರ ನನ್ನ ಸಹಿತ ಅನೇಕ ಬಿಜೆಪಿ ಶಾಸಕರು, ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗಿದೆ. ಆದರೆ ಸುಳ್ಳಿನ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂಬುದು ಈ ತೀರ್ಪಿನಿಂದ ಸಾಬೀತಾಗಿದೆ ಎಂದು ತಿಳಿಸಿದ್ದಾರೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net