ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿರುದ್ಧ FIR

1 HPT 5
Published on

ಹೊಸಪೇಟೆ: ಕನ್ನಡ ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಡಿ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿರುದ್ಧ ತಾಲೂಕಿನ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.

ಈ ಹಿಂದೆ ಕನ್ನಡ ವಿವಿಯಲ್ಲಿ ಕುಲಪತಿಯಾಗಿದ್ದ ಡಾ.ಮಲ್ಲಿಕಾ ಘಂಟಿ ೨೦೧೫- ೧೬, ೨೦೧೬- ೧೭ನೇ ಸಾಲಿನಲ್ಲಿ ೧.೬೯ ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೆಆರ್‌ಐಡಿಎಲ್ ಸಂಸ್ಥೆಯಿAದ ನಿರ್ವಹಿಸಲು ಆದೇಶಿಸುವ ಮೂಲಕ ಶೇ.೮ ರಷ್ಟ ಸೇವಾ ಶುಲ್ಕ ಮೊತ್ತದ ೧೩.೫೬ ಲಕ್ಷ ರೂ. ಆರ್ಥಿಕ ನಷ್ಟವನ್ನು ಉಂಟು ಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ಪರಿಷತ್ ನಡೆಸಿದ್ದ ತನಿಖಾ ವರದಿಯನ್ನು ಆಧರಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಕನ್ನಡ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ ಜು.೧೮ ರಂದು ನೀಡಿದ ಅನುಮೋದನೆ ಮೇರೆಗೆ ಕನ್ನಡ ವಿವಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ನೀಡಿದ ದೂರಿನ ಮೇರೆಗೆ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾಘಂಟಿ, ನಿವೃತ್ತ ಅಧಿಕಾರಿಗಳು ಹಾಗೂ ಸೇವೆಯಲ್ಲಿರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net