ಎಫ್‌ಐಆರ್‌ ಆಗಿದೆ ಈಶ್ವರಪ್ಪ ಜೊತೆ ಕೆಲ ವಿಚಾರ ನೇರವಾಗಿ ಮಾತನಾಡುವುದಿದೆ, ಸಿಎಂ ಬೊಮ್ಮಾಯಿ

Basavaraj-Bommai-Office-Facebook-08092021-1200_0_0
Published on

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಉಡುಪಿಯಲ್ಲಿ ಎಫ್‌ಐಆರ್‌ ಆಗಿದೆ, ಈ ಬಗ್ಗೆ ಸಚಿವ ಕೆ.ಎಸ್‌.ಈಶ್ವರಪ್ಪ ಜೊತೆ ನೇರವಾಗಿ ಮಾತನಾಡುತ್ತನೆ, ಕೆಲವೊಂದು ವಿಚಾರಗಳನ್ನು ಚರ್ಚಿಸಬೇಕಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಕಾನೂನಿನ ಪ್ರಕಾರ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪುನರುಚ್ಚರಿಸಿದರು.
ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು ಏನು ಪಾತ್ರ ವಹಿಸಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವ ಸತ್ಯಾಂಶ ತನಿಖೆಯಿಂದ ತಿಳಿಯಲಿದೆ, ನಮ್ಮ ವರಿಷ್ಠರಿಗೆ ವಿಷಯ ತಿಳಿದಿದೆ ಎಂದರು.
ಮುಖ್ಯಮಂತ್ರಿಗಳು ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಈಶ್ವರಪ್ಪ ಅವರು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ. ನೇರವಾಗಿ ಮಾತನಾಡಿದರೆ ಸ್ಪಷ್ಟವಾಗುತ್ತದೆ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net