

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ವಂಚನೆ ಪ್ರಕರಣ ಆರೋಪದ ಮೇರೆಗೆ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಿವೃತ್ತ ಐಪಿಎಸ್ ಅಧಿಕಾರಿ ಬಿ.ಎನ್.ಎಸ್. ರೆಡ್ಡಿ ವಿರುದ್ಧ ನಿಯಮ ಉಲ್ಲಂಘನೆ ಹಾಗೂ ಲಕ್ಷಾಂತರ ರೂಪಾಯಿ ವಂಚನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದಿರಾನಗರ ಕ್ಲಬ್ನಲ್ಲಿ ಇವರು ನಿಯಮ ಉಲ್ಲಂಘಿಸಿದ್ದಲ್ಲದೆ, ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಕ್ಲಬ್ ಸದಸ್ಯ ರಾಮ್ಮೋಹನ್ ಮೆನನ್ ನೀಡಿದ್ದ ದೂರಿನ ಮೇರೆಗೆ ಈ ಕ್ರಮ ಜರುಗಿದೆ.
ರಾಮ್ಮೋಹನ್ ಅವರು ರೆಡ್ಡಿ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಕೋರ್ಟ್ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ. ರೆಡ್ಡಿ ನಕಲಿ ಸಹಿ ಮಾಡಿ ವಂಚಿಸಿದ್ದಲ್ಲದೆ, ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.