ಆಣೆ ಪ್ರಮಾಣ: ಬಿಜೆಪಿ ಮುಖಂಡರ ಮೇಲೆ FIR

IMG-20230408-WA0004
Published on

ಗದಗ: ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ‌ ಉಲ್ಲಂಘನೆಯಡಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ನೀತಿ ಸಂಹಿತೆ ಉಲ್ಲಂಘಸಿ ಲಕ್ಷ್ಮೇಶ್ವರದ ಐತಿಹಾಸಿ ಸೋಮೇಶ್ವರ ದೇವಸ್ಥಾನದಲ್ಲಿ ಶಾಸಕರು ಮತ್ತು ಟಿಕೆಟ್ ಆಕಾಂಕ್ಷಿಗಳು ಚುನಾವಣೆ ಸಂದರ್ಭದಲ್ಲಿ ಒಗ್ಗಟ್ಟಾಗಿರಲು ಶುಕ್ರವಾರ ಆಣೆ ಪ್ರಮಾಣ ಮಾಡಿದ್ದರು. 

ಸೋಮೇಶ್ವರ ದೇವಸ್ಥಾನದಲ್ಲಿ ಎಂಎಲ್ಸಿ ಪ್ರದೀಪ್ ಶೆಟ್ಟರ್ ನೇತೃತ್ವದಲ್ಲಿ ಆಣೆ ಪ್ರಮಾಣ ನಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬೆಳಕಿಗೆ ಬಂದ ನಂತರ ಎಫೈಆರ್ ದಾಖಲಿಸಲಾಗಿದೆ.

ಎಂಎಲ್ಸಿ ಪ್ರದೀಪ್ ಶೆಟ್ಟರ್, ಟಿಕೆಟ್ ಆಕಾಂಕ್ಷಿಗಳಾದ ಶಾಸಕ  ರಾಮಣ್ಣ ಲಮಾಣಿ, ಡಾ. ಚಂದ್ರು ಲಮಾಣಿ, ಭೀಮಸಿಂಗ್ ರಾಠೋಡ, ಗುರುನಾಥ್ದಾ, ಉಷಾ ದಾಸರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net