

ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ಸಮೀಪದ ನಂದಿನಿ ಹೋಟೆಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಹೋಟೆಲ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಎಚ್ಚೆತ್ತು ಗ್ರಾಹಕರನ್ನು ಹೊರಕ್ಕೆ ಕಳುಹಿಸಿದ್ದಾರೆ.
ಹೋಟೆಲ್ ಇರುವ ಕಟ್ಟಡದಲ್ಲಿ ಬಟ್ಟೆ ಅಂಗಡಿಗಳು, ಸ್ಟೇಶನರಿ, ಮೆಡಿಕಲ್, ಮದ್ಯ ಮಾರಾಟ ಅಂಗಡಿಗಳಿದ್ದು, ಆತಂಕ ಸೃಷ್ಟಿ ಮಾಡಿತ್ತು.
ಕುಂದಾಪುರ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸಿದೆ.