

ಬೆಂಗಳೂರು: ಪೈಪ್ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಗೆ 8 ಬೈಕ್ಗಳು ಸುಟ್ಟಿವೆ.
ಆನೇಕಲ್‌ನ ಅತ್ತಿಬೆಲೆ ಪಟಾಕಿ ಬೆಂಕಿ ದುರಂತ ಮಾಸುವ ಮುನ್ನವೇ ಮತ್ತೇ ಇಂತಹದೇ ಘಟನೆ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದ ಅಗರಬತ್ತಿ ಹೊತ್ತಿ ಉರಿದ ಘಟನೆ ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.
ತಕ್ಷಣ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿದ ಎರಡು ಅಗ್ನಿಶಾಮಕ ವಾಹನದ ಸಿಬ್ಬಂದಿ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಅವಘಡದಿಂದಾಗಿ ಫ್ಯಾಕ್ಟರಿಯಲ್ಲಿದ್ದ ಕೆಮಿಕಲ್ ಲಿಕ್ವಿಡ್ ಹರಿದು ರಸ್ತೆಗೂ ಬೆಂಕಿ ಹಬ್ಬಿದ್ದು, 8 ಬೈಕ್ ಸುಟ್ಟು ಅಗ್ನಿಗಾಹುತಿಯಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.