ವಿದ್ಯುತ್ ಉಪ ಕೇಂದ್ರದಲ್ಲಿ ಬೆಂಕಿ ಅವಘಡ

30-03-Shiva-1
ರಾಯಚೂರು ನಗರದ ಡ್ಯಾಡಿ ಕಾಲನಿ ಹತ್ತಿರವಿರುವ 220 ಕೆವಿ ವಿದ್ಯುತ್ ಉಪ ಕೇಂದ್ರದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿರುವುದು.
Published on

ರಾಯಚೂರು: ನಗರದ ಡ್ಯಾಡಿ ಕಾಲನಿ ಹತ್ತಿರವಿರುವ 220 ಕೆವಿ ವಿದ್ಯುತ್ ಉಪ ಕೇಂದ್ರದಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಜರುಗಿದ್ದು, ವಿದ್ಯುತ್ ತಂತಿ ಹಾಗೂ ಸಾಮಗ್ರಿ ಸುಟ್ಟು ರಾತ್ರಿಯೀಡಿ ನಗರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುವಂತಾಗಿತ್ತು.
ಕೇಂದ್ರದಲ್ಲಿನ ಪರಿವರ್ತಕದಿಂದ ಬೆಂಕಿ ಕಿಡಿ ಕಾಣಿಸಿಕೊಂಡು ನೆಲದಲ್ಲಿನ ಹುಲ್ಲಿಗೆ ಬೆಂಕಿ ಹತ್ತಿಕೊಂಡಿದೆ. ಜತೆಗೆ ಆಯಿಲ್ ಬಿದ್ದಿದ್ದರಿಂದ ಬೆಂಕಿ ವ್ಯಾಪಕವಾಗಿ ಹರಡಿದ್ದರಿಂದ ವಿದ್ಯುತ್ ತಂತಿಗಳು ಸುಟ್ಟು ಹೋಗಿವೆ. ಇದರಿಂದಾಗಿ ವಿದ್ಯುತ್ ಸ್ಥಗಿತಗೊಳಿಸಲಾಯಿತು.
ಕತ್ತಲಾಗಿದ್ದರಿಂದ ದುರಸ್ತಿ ಕಾರ್ಯ ನಡೆಸಲು ಸಿಬ್ಬಂದಿ ಸಮಸ್ಯೆ ಎದುರಿಸುವಂತಾಗಿತ್ತು. ಸತತ ಪ್ರಯತ್ನದ ನಂತರ ಬೆಳಗ್ಗೆ ದುರಸ್ತಿ ಕಾರ್ಯ ಪೂರ್ಣಗೊಳಿಸಿ ವಿದ್ಯುತ್ ಸರಬರಾಜು ಆರಂಭಿಸಲಾಗಿತ್ತು. ರಾತ್ರಿ ಸಂಪೂರ್ಣ ವಿದ್ಯುತ್ ಸರಬರಾಜು ಕಡಿತಗೊಂಡಿದ್ದರಿಂದ ಜನರು ಸಮಸ್ಯೆ ಎದುರಿಸುವಂತಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net