ಏಷ್ಯಾದ ಅತಿದೊಡ್ಡ ಸೋಲಾರ್ ಘಟಕದಲ್ಲಿ ಅಗ್ನಿ ಅವಘಡ; ಧಗಧಗಿಸಿ ಉರಿದ ಕಾರು-ಬೈಕ್

Feature
Published on

ತುಮಕೂರು: ಏಷ್ಯಾದ ಅತಿದೊಡ್ಡ ಸೋಲಾರ್ ಘಟಕ ಎನಿಸಿಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಸೋಲಾರ್ ಪಾರ್ಕ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಾರು ಹಾಗೂ ಬೈಕ್​ ಧಗಧಗಿಸಿ ಉರಿದಿದೆ.

ಸೋಲಾರ್ ಪಾರ್ಕ್​ನ ತಿರುಮಣಿ ಭಾಗದ ಬ್ಲಾಕ್​ ನ. 37ರಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸೋಲಾರ್ ಪ್ಯಾನೆಲ್​ಗಳ ಕೆಳಗಿದ್ದ ಹುಲ್ಲಿಗೆ ಬೆಂಕಿ ತಗುಲಿದ್ದರಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದ್ದು, ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಒಂದು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು, ಒಟ್ಟು 10 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net