ಗೇರು ಪ್ಲಾಂಟೇಶನ್‌ಗೆ ಬೆಂಕಿ

fire new
Published on

ಗಂಗೊಳ್ಳಿ: ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ಸಮೀಪ ಗೇರು ಪ್ಲಾಂಟೇಶನ್‌ಗೆ ಭಾನುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಎಕರೆಗಟ್ಟಲೆ ಗೇರು ಪ್ಲಾಂಟೇಶನ್ ಸುಟ್ಟು ಹೋಗಿದೆ.

ತ್ರಾಸಿ-ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದಲ್ಲಿರುವ ರಾಜ್ಯ ಗೇರು ಅಭಿವೃದ್ಧಿ ನಿಗಮದ ಗೇರು ಪ್ಲಾಂಟೇಶನ್‌ಗೆ ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಐದಾರು ಎಕರೆಗೆ ಬೆಂಕಿ ವ್ಯಾಪಿಸಿದೆ. ಮಧ್ಯಾಹ್ನ ಹೊತ್ತಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಗಾಳಿಯ ರಭಸಕ್ಕೆ ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಾಗತೊಡಗಿತು. ಇದರಿಂದ ಗೇರು ಮರಗಳ ಸಹಿತ ಜಮೀನಿನಲ್ಲಿದ್ದ ಗಿಡ ಮರಗಳು ಸುಟ್ಟು ಕರಕಲಾಗಿವೆ.

ಸ್ಥಳಕ್ಕೆ ಧಾವಿಸಿದ ಬೈಂದೂರು ಮತ್ತು ಕುಂದಾಪುರ ಅಗ್ನಿಶಾಮಕ ದಳ ಸಿಬ್ಬಂದಿ, ಗಂಗೊಳ್ಳಿ ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದೆ.ಗಂಗೊಳ್ಳಿ ಠಾಣೆ ಉಪನಿರೀಕ್ಷಕ ಭೀಮಾಶಂಕರ ಎಸ್.ಸ್ಥಳದಲ್ಲಿ ಮೊಕ್ಕಾಂ ಹೂಡಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net