

ಆನೇಕಲ್: ಗ್ಯಾರೇಜ್ ಒಂದರಲ್ಲಿ ದಿಢೀರ್ ಎಂದು ಬೆಂಕಿ ಕಾಣಿಸಿಕೊಂಡು ಎರಡು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲ್ಲೂಕಿನ ಜಿಗಣಿ ಎಸಿಪಿ ವೃತ್ತದಲ್ಲಿ ನಡೆದಿದೆ.
ಗೋಪಿ ಎಂಬುವವರಿಗೆ ಸೇರಿದ್ದ ಗ್ಯಾರೇಜ್ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲೇ ಪಕ್ಕದ ಸ್ಟಿಕರ್ ಡಿಸೈನ್ ಅಂಗಡಿಗೂ ವ್ಯಾಪಿಸಿದೆ. ಜನನಿಬಿಡ ಪ್ರದೇಶದಲ್ಲಿ ಆಗ್ನಿ ಆವರಿಸಿ ಸಾರ್ವಜನಿಕರಲ್ಲಿ ಕೆಲಕಾಲ ಆತಂಕವನ್ನು ಉಂಟು ಮಾಡಿತ್ತು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಅಗ್ನಿಗಾಹುತಿಯಾಗಿದೆ.