

ಹೆಬ್ರಿ: ಚಾರ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ತಡರಾತ್ರಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಪಂಚಾಯಿತಿಯಲ್ಲಿದ್ದ ಫರ್ನಿಚರ್ ಹಾಗೂ ಕಂಪ್ಯೂಟರ್, ದಾಖಲೆಪತ್ರಗಳು ಭಾಗಶಃ ಸಂಪೂರ್ಣ ಸುಟ್ಟು ಹೋಗಿದೆ.
ಮಂಗಳವಾರ ಮುಂಜಾನೆ ಪಂಚಾಯಿತಿ ಕಟ್ಟಡದಿಂದ ಹೊಗೆ ಬರುತ್ತಿರುವುದನ್ನು ಕಂಡು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಬಂದಾಗ ಕಟ್ಟಡದ ರೆಕಾರ್ಡ್ ರೂಮ್‌ನಲ್ಲಿ ಬೆಂಕಿ ಉರಿಯುತ್ತಿತ್ತು. ಜನರ ಸಹಕಾರದಿಂದ ನೀರು ಸಿಂಪಡಿಸಿ ಬೆಂಕಿ ನಂದಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.