ಸರ್ಕಾರಿ ಬಸ್‌ನಲ್ಲಿ ಬೆಂಕಿ ಅವಘಡ

Fire safety
Published on

ಸುಳ್ಯ: ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರ ನಡೆದಿದೆ. ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ-ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್‌ನಲ್ಲಿ ದಿಢೀರ್ ಹೊಗೆ, ಬೆಂಕಿ ಕಾಣಿಸಿಕೊಂಡಿತು. ಬಸ್‌ನಲ್ಲಿದ್ದ ಪ್ರಯಾಣಿಕರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಬಳಿಕ ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿತು. ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಕಾರಣ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಬೆಂಕಿ ಕಾಣಿಸಲು ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net