

ಧಾರವಾಡ: ನಗರದ ಲೈನ್‌ಬಜಾರ್ ರಸ್ತೆಯ ಕಾಕರ ಓಣಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಮನೆ ಹೊತ್ತಿರ ಉರಿದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಬೇಪಾರಿ ಎಂಬುವರ ಮನೆಯಲ್ಲಿ ಅವಘಡ ನಡೆದಿದ್ದು, ಮನೆಯಲ್ಲಿ ಯಾರೂ ವಾಸವಿರಲಿಲ್ಲ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯಿಂದ ದಟ್ಟ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು, ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.