ಯೂರೋಪ್ ಹೆಸರಿನ ಅಂಗಡಿಯಲ್ಲಿ ಘಟನೆ ನಡೆದಿದೆ. ಬೆಂಕಿಯ ತೀವ್ರತೆ ಅಕ್ಕ-ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಗ್ನಿಶಾಮಕ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಅಂಗಡಿಗೆ ಅಪಾರ ಪ್ರಮಾಣದ ಹಾನಿಯುಂಟಾಗಿದೆ.