

ಮಂಡ್ಯ: ಇಲ್ಲಿನ ಚಾಮುಂಡೇಶ್ವರಿನಗರದ 9ನೇ ಕ್ರಾಸ್‌ನಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿಯಿಂದ ಶೀಟ್ ಮನೆಯೊಂದು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಘಟನೆ ಸಂಭವಿಸಿದ ವೇಳೆ ಯಾರು ಮನೆಯಲ್ಲಿ ಇರಲಿಲ್ಲ.
ಲಕ್ಷ್ಮೀಕಾಂತ್ ಎಂಬುವರಿಗೆ ಶೀಟ್ ಮನೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಗೆ ಜೋರಾಗಿದೆ. ಪರಿಣಾಮ ಮನೆಯೊಳಗಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದೆ. ಈ ವೇಳೆ ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸಿಬ್ಬಂದಿ ಬಂದು ಅಗ್ನಿ ನಂದಿಸುವಲ್ಲಿ ಯಶಸ್ವಿಯಾದರು. ಇನ್ನು ಒಳಗೆ ಗ್ಯಾಸ್ ಸಿಲಿಂಡರ್ ಇದ್ದರೂ ಬೆಂಕಿ ಹೊತ್ತಿಕೊಳ್ಳದ ಕಾರಣ ಹೆಚ್ಚಿನ ಅವಘಡ ಸಂಭವಿಸಿಲ್ಲ. ದೇವರ ಫೋಟೋ ಮುಂದೆ ಹಚ್ಚಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.