ಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು!

fire tempal
Published on

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟು ವಿಕೃತಿ ಮೆರೆದಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೆಬಿಡಿ ಬಳಿಯ ಸರ್ಕಲ್​ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬುಧವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಗರ್ಭಗುಡಿಯಲ್ಲಿದ್ದ ಕಲ್ಲಿನ ಆಂಜನೇಯ ಸ್ವಾಮಿ ಮೂರ್ತಿ ಭಗ್ನಗೊಂಡಿದೆ. ಇದನ್ನೂ ಓದಿರಿ ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ರಾ.ಹೆ.4ರ ತುಮಕೂರು ರಸ್ತೆ ಪಕ್ಕದಲ್ಲೇ ರ್ಕಲ್​ ಆಂಜನೇಯ ಸ್ವಾಮಿ ದೇವಾಲಯವಿದೆ. ದೇವಾಲಯಕ್ಕೆ ನುಗ್ಗಿದ ಕಿಡಿಗೇಡಿಗಳು ಹುಂಡಿ ಮತ್ತು ಇತರ ವಸ್ತುಗಳನ್ನು ಕದ್ದು, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಗುರುವಾರ ಮುಂಜಾನೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net